ಡಿ.21ರಿಂದ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧಿವೇಶನ: ಭಾರತಿ ಶೆಟ್ಟಿ
ಬೆಂಗಳೂರು, ಡಿ. 18: ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧಿವೇಶನ ಗುಜರಾತ್ನ ಅಹ್ಮದಾಬಾದ್ನಲ್ಲಿ ಡಿ.21ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಈ ಅಧಿವೇಶನದಲ್ಲಿ ರಾಜ್ಯದಿಂದ 600 ಮಹಿಳಾ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ತಿಳಿಸಿದ್ದಾರೆ.
2019ರ ಚುನಾವಣೆಯಲ್ಲಿ ಮೋದಿ ನೇತೃತ್ವದ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಮೂಲ ಉದ್ದೇಶದಿಂದ ರಾಷ್ಟ್ರೀಯ ಅಧಿವೇಶನ ಹಮ್ಮಿಕೊಂಡಿದ್ದು, ಡಿ.21ಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಡಿ.22ರ ಸಂಜೆ 5 ಗಂಟೆಗೆ ಪ್ರಧಾನಿ ಮೋದಿಯವರು ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಮಹಿಳಾ ಸಚಿವರು, ಸಂಸದರು, ಶಾಸಕರು ಸೇರಿದಂತೆ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಭಾರತಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story