ವೇಶ್ಯಾವಾಟಿಕೆ ದಂಧೆ: ಮಹಿಳೆ ಸೆರೆ
ಬೆಂಗಳೂರು, ಡಿ.19: ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಹೊರ ರಾಜ್ಯದಿಂದ ಹೆಣ್ಣು ಮಕ್ಕಳನ್ನು ಕರೆತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಮಹಿಳೆಯೊಬ್ಬಾಕೆಯನ್ನು ಬಂಧಿಸಿದ್ದಾರೆ.
ನಗರದ ಕಾಮಾಕ್ಷಿಪಾಳ್ಯದ ವೃಷಭಾವತಿನಗರದ ನಿವಾಸಿ ನೀಲಂ ಶರ್ಮಾ(29) ಬಂಧಿತ ಆರೋಪಿ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
ವೃಷಭಾವತಿನಗರದ ಯುನಿಟೆಕ್ ಅಪಾರ್ಟ್ಮೆಂಟ್ನಲ್ಲಿ ವಾಸಕ್ಕೆಂದು ಮನೆಯನ್ನು ಬಾಡಿಗೆ ಪಡೆದು ಹೊರ ರಾಜ್ಯದಿಂದ ಅಮಾಯಕ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸುತ್ತಿದ್ದಾಳೆಂಬ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಯಿಂದ 6 ಸಾವಿರ ರೂ. ನಗದು, ಮೊಬೈಲ್ ಮತ್ತು ಓರ್ವ ಯುವತಿ ಅನ್ನು ರಕ್ಷಣೆ ಮಾಡಿ, ಇಲ್ಲಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story