ಗಾಂಜಾ ಮಾರಾಟ: ಅಂತರಾಜ್ಯ ಆರೋಪಿಗಳ ಬಂಧನ
ಬೆಂಗಳೂರು, ಡಿ.25: ಮಾದಕ ವಸ್ತು ಗಾಂಜಾ ಮಾರಾಟ ಆರೋಪದಡಿ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಇಲ್ಲಿನ ತಿಲಕ್ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂದೀಪ್ ರೈಬಿನ್, ಮಿರ್ನಲ್, ಪ್ರಸನ್ನ ಜೀತ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಮೂಲತಃ ತ್ರಿಪುರ ಮತ್ತು ಪಶ್ಚಿಮ ಬಂಗಾಳ ರಾಜ್ಯದ ನಿವಾಸಿಗಳಾಗಿರುವ ಆರೋಪಿಗಳು. ನಗರದ ಈಜಿಪುರದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಇದರಲ್ಲಿ ಪ್ರಮುಖ ಆರೋಪಿ ಮಂದೀಪ್, ತ್ರಿಪುರದಲ್ಲಿದ್ದ ಮಿರ್ನಲ್ ಮತ್ತು ಪ್ರಸನ್ನ ಜೀತ್ ಎಂಬುವರಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಪಡೆದು ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಗಾಂಜಾ, ನಗದು, ಬೈಕ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Next Story