ಶೂಟೌಟ್ ಹೇಳಿಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದೂರು
ಬೆಂಗಳೂರು, ಡಿ.26: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡಿದ ಶೂಟೌಟ್ ಹೇಳಿಕೆಯ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.
ಮಾನವ ಹಕ್ಕುಗಳ ಹೋರಾಟಗಾರ ಟಿ.ನರಸಿಂಹಮೂರ್ತಿ ಆಯೋಗಕ್ಕೆ ಬುಧವಾರ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಶೂಟೌಟ್ ಹೇಳಿಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಾನೂನಿನ ದುರುಪಯೋಗವಾಗುವ ಸಾಧ್ಯತೆಯೂ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Next Story