ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ
ಬೆಂಗಳೂರು, ಜ.11: ನಗರದ ಬೊಮ್ಮನಹಳ್ಳಿ ಬಳಿಯ ಖಾಸಗಿ ಕಾಲೇಜು ಮುಂಭಾಗ ಇರುವ ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು.
ಟ್ರಾನ್ಸ್ಫಾರ್ಮರ್ನಲ್ಲಿ ಕೆಳಗೆ ಕಸವಿದ್ದು, ಯಾರೋ ಕಿಡಿಗೇಡಿಗಳು ಕಸಕ್ಕೆ ಬೆಂಕಿ ಹಾಕಿದ ಪರಿಣಾಮ ಬೆಂಕಿ ಜ್ವಾಲೆ ವ್ಯಾಪಿಸಿ ಟ್ರಾನ್ಸ್ಫಾರ್ಮರ್ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಅವಘಡ ಸಂಬಂಧ ಸ್ಧಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.
Next Story