ಬೆಂಗಳೂರು, ಜ.16: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬುಧವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ನೆರವಿಗಾಗಿ ಮನವಿ ಸಲ್ಲಿಸಿದ ಆರು ಮಂದಿಗೆ ಸ್ಥಳದಲ್ಲೇ ನೆರವು ನೀಡಿದರು. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಿಂದ ಮನವಿ ಸ್ವೀಕರಿಸಿ ಸೂಕ್ತ ಕ್ರಮದ ಭರವಸೆ ನೀಡಿದರು.