ಕ್ರಿಕೆಟ್ ಬೆಟ್ಟಿಂಗ್: ಓರ್ವನ ಬಂಧನ
ಬೆಂಗಳೂರು, ಜ.19: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪ ಕೇಳಿಬಂದ ಹಿನ್ನೆಲೆ, ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
ನಗರದ ಕಲಾಸಿಪಾಳ್ಯದ ಜರ್ನಲಿಸ್ಟ್ ಕಾಲನಿಯ ಮಹದೇವ ಆಟೋಮೊಬೈಲ್ ಅಂಗಡಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿ ಪಟೇಲ್(28) ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತನಿಂದ 1.2 ಲಕ್ಷ ರೂ. ನಗದು ಸೇರಿ ಬೆಟ್ಟಿಂಗ್ಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಭಾರತ-ಆಸ್ಟ್ರೇಲಿಯಾ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದನು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದು ವರೆಸಲಾಗಿದೆ.
Next Story