ಮದ್ಯದ ಅಮಲಿನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ
ಬೆಂಗಳೂರು, ಫೆ.2: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇಲ್ಲಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುಮಾರು ಹತ್ತಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು 36 ವರ್ಷದ ವ್ಯಕ್ತಿಯನ್ನು ಆರೋಪಿ ಅರುಣ್ ಎಂಬಾತ ಕೊಲೆಗೈದಿದ್ದಾನೆ ಎಂದು ಹೇಳಲಾಗುತ್ತಿದೆ.
ನೀಲಸಂದ್ರ ಬಳಿಯ ರೋಸ್ ಗಾರ್ಡನ್ 6 ನೇ ಕ್ರಾಸ್ನಲ್ಲಿ ಡಿ.25 ರಂದು ರಾತ್ರಿ ಮದ್ಯದ ಅಮಲಿನಲ್ಲಿ ಮೃತ ವ್ಯಕ್ತಿ ಮತ್ತು ಅರುಣ್ ನಡುವೆ ಗಲಾಟೆಯಾಗಿದೆ ಎನ್ನಲಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಅರುಣ್ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಕರಣ ಸಂಬಂಧ ಅಶೋಕ ನಗರ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story