ಪ್ರಿಯಾಂಕಾ ಗಾಂಧಿ ವಿರುದ್ಧ ಅವಹೇಳನ: ಸೈಬರ್ ಕ್ರೈಂ ಠಾಣೆಗೆ ದೂರು
ಪ್ರಿಯಾಂಕಾ ಗಾಂಧಿ
ಬೆಂಗಳೂರು, ಫೆ.4: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಅಪಪ್ರಚಾರ, ಟೀಕೆ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಸೋಮವಾರ ನಗರದ ಆಯುಕ್ತರ ಕಚೇರಿಯ ಆವರಣದಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ದೂರು ಸಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಅಶ್ಲೀಲ ಫೋಟೊ ಮತ್ತು ಸುಳ್ಳು ಸುದ್ದಿಗಳ ಮೂಲಕ ಪ್ರಿಯಾಂಕಾ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ್ದಾರೆ. ಹೀಗಾಗಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಲಾಗಿದೆ ಎಂದರು.
Next Story