ವಿವಾಹ ನಿಶ್ಚಯವಾಗಿದ್ದ ಯುವತಿ ನಾಪತ್ತೆ
ಬೆಂಗಳೂರು, ಫೆ.6: ಪೋಷಕರು ಸಂಬಂಧಿಕರಿಗೆ ಲಗ್ನ ಪತ್ರಿಕೆ ಹಂಚುತ್ತಿದ್ದಾರೆ, ಇತ್ತ ಮದುಮಗಳು ಕಳೆದ ಎರಡು ದಿನದಿಂದ ನಾಪತ್ತೆ ಆಗಿರುವ ಘಟನೆ ಗಾರೆಬಾವಿ ಪಾಳ್ಯದಲ್ಲಿ ನಡೆದಿದೆ ಎನ್ನಲಾಗಿದೆ.
ಇಂಜಿನಿಯರಿಂಗ್ ಮುಗಿಸಿ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಕಲ್ಯಾಣಿ(24) ನಾಪತ್ತೆಯಾಗಿದ್ದು, ಮಂಗಳವಾರ ಕೆಲಸಕ್ಕೆ ಹೋಗಿದ್ದ ಯುವತಿ ಮತ್ತೆ ಮನೆಗೆ ಹಿಂತಿರುಗಲಿಲ್ಲ ಎಂದು ತಿಳಿದುಬಂದಿದೆ.
ಯುವತಿ ಬಳಸುತ್ತಿದ್ದ ಎರಡು ಮೊಬೈಲ್ಗಳು ಬಂದ್ ಆಗಿದೆ. ಕಲ್ಯಾಣಿ ಪ್ರೀತಿಸುತ್ತಿದ್ದ ಯುವಕನ ಜೊತೆಯೇ ಕುಟುಂಬಸ್ಥರು ಮದುವೆ ನಿಶ್ಚಯ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಮಾ.3 ರಂದು ತಮಿಳುನಾಡಿನಲ್ಲಿ ಕಲ್ಯಾಣಿ ಮದುವೆ ಮಾಡಲು ಆಕೆಯ ಪೋಷಕರು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಯುವತಿಯ ನಾಪತ್ತೆಯಿಂದ ಕುಟುಂಬಸ್ಥರು ಈಗ ಕಂಗಾಲಾಗಿ ಹೋಗಿದ್ದಾರೆ. ಈ ಬಗ್ಗೆ ಸದ್ದುಗುಂಟೆ ಪಾಳ್ಯದಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story