ಮೋದಿ ಸರಕಾರದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳ: ದಿನೇಶ್ ಗುಂಡೂರಾವ್
ಬೆಂಗಳೂರು, ಫೆ.7: ಕಳೆದ ನಲವತ್ತು ವರ್ಷಗಳಲ್ಲೇ ನಿರುದ್ಯೋಗ ಪ್ರಮಾಣ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಹೆಚ್ಚಾಗಿದೆ. ಆದರೂ ದೇಶದ ಜನತೆಗೆ ತಪ್ಪು ಅಂಕಿ ಅಂಶಗಳನ್ನು ನೀಡುವ ಮೂಲಕ ದಾರಿ ತಪ್ಪಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಬಿಜೆಪಿ ಸುಳ್ಳು ಸುದ್ದಿಗಳ ಮೂಲಕ ಮತಗಳನ್ನು ಪಡೆಯಲು ಹೊರಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲ ಷಡ್ಯಂತ್ರಗಳನ್ನು ಬಯಲುಗೊಳಿಸಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಬೇಕು ಎಂದು ಅವರು ಹೇಳಿದರು.
Next Story