ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
ಬೆಂಗಳೂರು, ಫೆ.13: ಬೊಲೆರೋ ಲಗೇಜ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಇಲ್ಲಿನ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟೊಮೆಟೋ ತುಂಬಿಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ಬೊಲೆರೋ ವಾಹನ ಮಾರ್ಗ ಮಧ್ಯೆ ಇಮಚೇನಹಳ್ಳಿ ಬಳಿ ಪಲ್ಸರ್ ಬೈಕ್ಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಲು ರಸ್ತೆ ತಿರುವು ಹಾಗೂ ಮಧ್ಯರಾತ್ರಿಯ ನಿದ್ದೆ ಮಂಪರು ಕಾರಣ ಎಂದು ಹೇಳಲಾಗುತ್ತಿದೆ. ಮೃತ ಬೈಕ್ ಸವಾರನ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ದಾಬಸ್ಪೇಟೆ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story