ಅಂಗಡಿಗೆ ನುಗ್ಗಿ ನಗದು ಸೇರಿ 15 ಲಕ್ಷ ಮೌಲ್ಯದ ವಸ್ತು ಕಳವು
ಬೆಂಗಳೂರು, ಫೆ.13: ಹಾರ್ಡ್ವೇರ್ ಅಂಗಡಿಯ ರೋಲಿಂಗ್ ಶೆಟರ್ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ನಗದು ಸೇರಿ 15 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿರುವ ದುರ್ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಕೋಟೆಯ ನಂದಗುಡಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಸೂರ್ಯ ಹಾರ್ಡ್ವೇರ್ ಅಂಗಡಿಯ ರೋಲಿಂಗ್ ಶೆಟರ್ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು, ನಗದು, ಎಲೆಕ್ಟ್ರಿಕ್ ವೈರ್ಗಳು, ಪ್ಲಂಬರ್ ಸಾಮಗ್ರಿಗಳು, ಲ್ಯಾಪ್ ಟಾಪ್ ಸೇರಿ 15 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಅಂಗಡಿಯ ಮಾಲಕರು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಕಂಡುಬಂದಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಬೆರಳಚ್ಚುದಳ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Next Story