ಜಲ ಮಂಡಳಿ: ಫೆ.16ರಿಂದ ಫೋನ್ ಇನ್ ಕಾರ್ಯಕ್ರಮ
ಬೆಂಗಳೂರು, ಫೆ.14: ಬೆಂಗಳೂರು ಜಲ ಮಂಡಳಿಯು ಪ್ರತಿ ಶನಿವಾರ ಬೆಳಗ್ಗೆ 9ರಿಂದ 10ರವರೆಗೆ ಮಂಡಳಿಯ ಅಧ್ಯಕ್ಷರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಸಂಬಂಧ ಫೆ.16ರಂದು ಬೆಳಗ್ಗೆ 9ರಿಂದ 10.30ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ವಲಯ, ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ, ಒಳಚರಂಡಿ ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ ಜಲ ಮಂಡಳಿಯ ಅಧ್ಯಕ್ಷರೊಂದಿಗೆ ನೇರವಾಗಿ ಮಾತನಾಡಿ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ದೂ.080-22945119ಕ್ಕೆ ಸಂಪರ್ಕಿಸಲು ಜಲಮಂಡಳಿ ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಲಾಗಿದೆ.
Next Story