ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಅಂಬರೀಶ್ ಪತ್ನಿ ಸುಮಲತಾ
ಬೆಂಗಳೂರು, ಫೆ. 20: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿರುವ ಕೇಂದ್ರದ ಮಾಜಿ ಸಚಿವ, ನಟ ಅಂಬರೀಶ್ ಅವರ ಪತ್ನಿ ನಟಿ ಸುಮಲತಾ ಅಂಬರೀಶ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಬುಧವಾರ ಸಂಜೆ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.
ಸೀಟು ಹಂಚಿಕೆ ಸಂಬಂಧ ಜೆಡಿಎಸ್ ವರಿಷ್ಠ ದೇವೇಗೌಡ ಅವರೊಂದಿಗೆ ಸಮಾಲೋಚನೆ ನಡೆಸಬೇಕಿದೆ. ಹೀಗಾಗಿ ಪಕ್ಷದಿಂದಲೇ ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
Next Story