ವಾಹನ ಹರಿದು ಪಾದಾಚಾರಿ ಮೃತ್ಯು
ಬೆಂಗಳೂರು, ಫೆ.22: ಶರವೇಗವಾಗಿ ಬಂದ ಟಾಟಾ ಏಸ್ ವಾಹನ ಹರಿದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಬಾಣಸವಾಡಿಯ ಹನುಮಂತರಾಯಪ್ಪ(68) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.
ಕೂಲಿ ಕೆಲಸ ಮಾಡುತ್ತಿದ್ದ ಹನುಮಂತರಾಯಪ್ಪ ಅವರು, ಗುರುವಾರ ರಾತ್ರಿ 9:30ರ ಸುಮಾರಿಗೆ ಬಾಣಸವಾಡಿಯ ಅಗ್ನಿಶಾಮಕ ದಳ ಕಚೇರಿಯ ಮುಂಭಾಗ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಟಾಟಾ ಏಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಬಾಣಸವಾಡಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story