ಮಾ.5: ಮುಖ್ಯಮಂತ್ರಿಗಳ ರತ್ನ ಪ್ರಶಸ್ತಿ ಪ್ರದಾನ
ಬೆಂಗಳೂರು, ಮಾ.2: ಸಾರ್ವಜನಿಕ ಉದ್ದಿಮೆಗಳ ಇಲಾಖೆ ವತಿಯಿಂದ ಮಾ.5ರ ಸಂಜೆ 5:30ಕ್ಕೆ ನಗರದ ಹೊಟೇಲ್ ಲಲಿತ್ ಅಶೋಕ್ನಲ್ಲಿ 2018-19ನೆ ಸಾಲಿನ ಮುಖ್ಯಮಂತ್ರಿಗಳ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿಗಳ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
Next Story