ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮಾ.5: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಆರ್ಥಿಕ ಮತ್ತು ಐಟಿ) ಡಾ.ಲೋಕೇಶ್ ಎಂ.ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಆಡಳಿತ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಆಡಳಿತ) ಡಿ.ರಣದೀಪ್ರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಆರ್ಥಿಕ ಮತ್ತು ಐಟಿ)ರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story