ಲೋಕಸಭೆ ಚುನಾವಣೆ: ಸಿಇಟಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ
ಬೆಂಗಳೂರು, ಮಾ. 11: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಎಪ್ರಿಲ್ 23 ಮತ್ತು 24ರಂದು ನಿಗದಿಯಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ಮುಂದೂಡುವ ಸಾಧ್ಯತೆಗಳಿವೆ.
ಲೋಕಸಭೆ ಚುನಾವಣೆ ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯಲಿದ್ದು, ಎರಡನೇ ಹಂತದ ಚುನಾವಣೆ ಎ.23ರಂದು ನಡೆಯಲಿದೆ.
ಸಿಇಟಿ ಪರೀಕ್ಷೆಯೂ ಅದೇ ದಿನ ಇದ್ದು, ಪರೀಕ್ಷೆಗೆ ಕೂರಲಿರುವ ಅಭ್ಯರ್ಥಿಗಳಿಗೆ ಮತದಾನ ಮಾಡಲು ಅಡ್ಡಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯಗಳ ಯುವಕ-ಯುವತಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಹೀಗಾಗಿ ಪರೀಕ್ಷೆ ದಿನಾಂಕ ಬದಲಾವಣೆ ಕುರಿತು ನಿರ್ಧರಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
Next Story