ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿಎಂ
ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್
ಬೆಂಗಳೂರು, ಮಾ.19: ಲಘು ಹೃದಯಘಾತ ಸಂಬಂಧ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರನ್ನು ಮಂಗಳವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರಿಂದ ವಿಶ್ವನಾಥ್ ಅವರ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಹಿತಿ ಪಡೆದು, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸೋಮವಾರ ಸಂಜೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೂಡ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ವಿಶ್ವನಾಥ್ ಅವರ ಆರೋಗ್ಯ ವಿಚಾರಿಸಿದ್ದರು.
Next Story