ಜೂಜಾಟ ಕ್ಲಬ್ ಮೇಲೆ ಸಿಸಿಬಿ ದಾಳಿ: 54 ಮಂದಿಯ ಬಂಧನ, 1.56 ಲಕ್ಷ ನಗದು ಜಪ್ತಿ
ಬೆಂಗಳೂರು, ಮಾ.21: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ ನಗರದ ಕ್ಲಬ್ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 54 ಜನರನ್ನು ಬಂಧಿಸಿ, 1.56 ಲಕ್ಷ ರೂಪಾಯಿ ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಗಂಗಾನಗರ ಬಳ್ಳಾರಿ ರಸ್ತೆಯಲ್ಲಿರುವ ಬ್ಲೂ ಮೌಂಟ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ನಲ್ಲಿ ಸದಸ್ಯರಲ್ಲದ ಕೆಲವು ಜನ ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಜೂಜಾಟಕ್ಕೆ ಸಂಬಂಧಿಸಿದ 1.56 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದು, ಈ ಸಂಬಂಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.
Next Story