ಬೆಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಕೃಷ್ಣಬೈರೇಗೌಡ
ಬೆಂಗಳೂರು, ಮಾ24: ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ವಯ ಜೆಡಿಎಸ್ ಪಾಲಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಇಂದು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿತ್ತು. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಸಚಿವ ಕೃಷ್ಣಬೈರೇಗೌಡ ಅವರಿಗೆ ಟಿಕೆಟ್ ನೀಡಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಕೃಷ್ಣ ಬೈರೇಗೌಡ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್, ಜೆಡಿಎಸ್ ಶಾಸಕರು ಹಾಜರಿದ್ದರು.
ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾಗಿರುವ ಕೃಷ್ಣಬೈರೇಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಸದಾನಂದ ಗೌಡ ಕಣದಲ್ಲಿದ್ದಾರೆ.
Next Story