ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ: 7 ಲಕ್ಷ ಮೌಲ್ಯದ ವಸ್ತು ಜಪ್ತಿ
ಬೆಂಗಳೂರು,ಮಾ.26: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಒರಿಸ್ಸಾ ಮೂಲದ ಎಝ್ರಾ ಮಾಲಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 7 ಲಕ್ಷ ಮೌಲ್ಯದ 15 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಆರೋಪಿ ಎಝ್ರ ಮಾಲಿ ಒರಿಸ್ಸಾ ರಾಜ್ಯದವನಾದರೂ, ಬೆಂಗಳೂರಿನಲ್ಲಿ ಖಾಸಗಿ ಬಸ್ ಚಾಲನೆ ಮಾಡಿಕೊಂಡು ಮಳವಳ್ಳಿಯಲ್ಲಿ ವಾಸವಾಗಿದ್ದನು. ಒರಿಸ್ಸಾದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ. ಕಾಡುಗೋಡಿ ಬಸ್ ನಿಲ್ದಾಣದ ಹತ್ತಿರ ಗಾಂಜಾ ಮಾರಾಟ ಮಾಡುವ ವೇಳೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7 ಲಕ್ಷ ಮೌಲ್ಯದ 15ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story