ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ
ಬೆಂಗಳೂರು, ಎ.2: ನಗರದ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಮಾಗಡಿ ರಸ್ತೆಯ ಸೀಗೆಹಳ್ಳಿ ಗೇಟ್ ಬಳಿ ನಡೆದಿದೆ.
ಫ್ಲೈವುಡ್ ಸಾಮಗ್ರಿಗಳಿದ್ದ ಗೋದಾಮಿನಲ್ಲಿ ಬೆಂಕಿ ತಗುಲಿದ ಪರಿಣಾಮ, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ನಂದಿಸಲು 5 ಅಗ್ನಿಶಾಮಕ ವಾಹನ ಹಾಗೂ 25ಕ್ಕೂ ಹೆಚ್ಚಿನ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಘಟನೆ ಸಂಬಂಧ ಮಾಗಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story