ಸ್ನೇಹಿತನ ಕೊಲೆ ಪ್ರಕರಣ: ಯುವಕ ಬಂಧನ
ಬೆಂಗಳೂರು, ಎ.15: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಕೊಲೆಗೈದಿದ್ದ ಪ್ರಕರಣ ಸಂಬಂಧ ಯುವಕನೋರ್ವನನ್ನು ಇಲ್ಲಿನ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ನಿವಾಸಿ ಮನೋಹರ್ ಪ್ರೇಮ್ಚಂದ್ ವರ್ಮಾ (33) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಜನವರಿ 15 ರಂದು ಲಗ್ಗರೆಯ ಕೆಂಪೇಗೌಡಲೇಔಟ್ನ ಶೆಡ್ನಲ್ಲಿ ಸ್ನೇಹಿತ ರಮೇಶ್ನನ್ನು ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಗಂಭೀರ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ರಮೇಶ್ನ ಕೊಲೆ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಉತ್ತರ ಪ್ರದೇಶಕ್ಕೆ ತೆರಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ
Next Story