ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು
ಬೆಂಗಳೂರು, ಎ.16: ಲೋಕಸಭಾ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ.
ಚುನಾವಣಾ ನೀತಿ ಸಂಹಿತೆ ಅನ್ವಯ ಪ್ರಚಾರ ಮೆರವಣಿಗೆಯಲ್ಲಿ ತಮ್ಮ ವಾಹನಕ್ಕೆ ಎಲ್ಇಡಿ ದೀಪ ಅಳವಡಿಕೆ ಮಾಡುವಂತಿಲ್ಲ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದ್ದ ಮೆರವಣಿಗೆಯಲ್ಲಿ ಎಲ್ಇಡಿ ದೀಪ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಯೋಗಾನಂದ ಅವರು ಬೆಂಗಳೂರು ದಕ್ಷಿಣ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ.
Next Story