ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ
ಬೆಂಗಳೂರು, ಎ.22: ಹಳೇ ದ್ವೇಷದ ಹಿನ್ನೆಲೆ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ದುರ್ಘಟನೆ ಇಲ್ಲಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆಸಿ ನಗರ ನಿವಾಸಿ ವಿಘ್ನೇಶ್ ಎಂಬಾತ ಕೊಲೆಯಾದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ರಾತ್ರಿ ವಿಘ್ನೇಶ್ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ಸ್ಥಳೀಯರು ವಿಘ್ನೇಶ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ವಿಘ್ನೇಶ್ ಇತ್ತೀಚಿಗೆ ಯುವಕರೊಂದಿಗೆ ಜಳಗವಾಡಿಕೊಂಡಿದ್ದ. ಈತನ ಮೇಲೆ ಮೊಬೈಲ್ ಕಳ್ಳತನ, ಸುಲಿಗೆ ಹಾಗೂ ಕೊಲೆಯತ್ನ ಆರೋಪ ಸಂಬಂಧ ದೂರುಗಳು ದಾಖಲಾಗಿವೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story