ಬಸ್ಗೆ ಲಾರಿ ಢಿಕ್ಕಿ; ಎಂಟು ಮಂದಿಗೆ ಗಂಭೀರ ಗಾಯ
ಬೆಂಗಳೂರು, ಎ.22: ಶರವೇಗವಾಗಿ ಸಾಗುತ್ತಿದ್ದ ಲಾರಿಯೊಂದು ಏಕಾಏಕಿ ಖಾಸಗಿ ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ, ಎಂಟು ಮಂದಿ ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಇಲ್ಲಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ಜಿಗಣಿ ಎಪಿಎಸ್ ವೃತ್ತದಲ್ಲಿ ಬಸ್ಸಿಗೆ ಏಕಾಏಕಿ ಲಾರಿ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.
ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ಬಸ್ಸಿನಲ್ಲಿದ್ದ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾರಿ ಚಾಲಕನ ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Next Story