ಮಿಂಟೋ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯರ ಕಣ್ಣಿನ ತಪಾಸಣೆ
ಬೆಂಗಳೂರು, ಮೇ 2: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಸರಕಾರಿ ಮಿಂಟೋ ಕಣ್ಣಾಸ್ಪತ್ರೆಗೆ ಭೇಟಿ ನೀಡಿ ತಮ್ಮ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ.
ಗುರುವಾರ ಮಧ್ಯಾಹ್ನ ಆಸ್ಪತ್ರೆಗೆ ತೆರಳಿದ ಸಿದ್ದರಾಮಯ್ಯ, ಅಲ್ಲಿನ ವೈದ್ಯರು ತಮ್ಮ ಕಣ್ಣುಗಳನ್ನು ಪರೀಕ್ಷಿಸಿಕೊಂಡರು. ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಣ್ಣಿನ ಪರೀಕ್ಷೆಗಾಗಿ ನಾನು ಮಿಂಟೋ ಆಸ್ಪತ್ರೆಗೆ ಆಗಮಿಸಿದ್ದೆ. ಕಣ್ಣಿನ ತಪಾಸಣೆಗಾಗಿ ಆಗಾಗ ಆಸ್ಪತ್ರೆಗೆ ಬರುತ್ತಿರುತ್ತೇನೆ ಎಂದು ಸ್ಪಷ್ಟನೆ ನೀಡಿದರು.
Next Story