ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಪೋಷಕರಿಗೆ ಸಿಎಂ ಕುಮಾರಸ್ವಾಮಿ ಮನವಿ
ಬೆಂಗಳೂರು, ಮೇ 2: ‘ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವಂತೆ ಪ್ರೇರೇಪಿಸಲು ರಾಜ್ಯ ಶಿಕ್ಷಣ ಇಲಾಖೆ ಕೈಗೊಂಡಿರುವ ಅಭಿಯಾನ ಅಭಿನಂದನೀಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವ ಅಭಿಯಾನಕ್ಕೆ ಪಾಲಕರು ಸಕಾರಾತ್ಮಕವಾಗಿ ಸ್ಪಂದಿಸಿ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಬೇಕೆಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ.
Next Story