ಕುಮಾರಸ್ವಾಮಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಆರ್.ಅಶೋಕ್
ಬೆಂಗಳೂರು, ಮೇ 23: ರಾಜ್ಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ. ಹಾಗೂ ಮುಖ್ಯಮಂತ್ರಿ ಎಚ್.ಡಿ.ಕಮಾರಸ್ವಾಮಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದೆ. ರಾಜ್ಯದಲ್ಲಿ ಮೈತ್ರಿ ಸರಕಾರ ನಡೆಸಲು ವಿಫಲರಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗೋದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ರಾಜ್ಯದ ಜನ ನಮ್ಮ ಜತೆ ಇದ್ದಾರೆ. ರಾಜ್ಯದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯವೆಂಬುದನ್ನು ರಾಜ್ಯದ ಜನತೆ ಸ್ಪಷ್ಟವಾದ ಸಂದೇಶ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದರು.
ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿಯನ್ನ ಆಯ್ಕೆ ಮಾಡಿರೋದು ಸ್ಪಷ್ಟವಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಬಿಜೆಪಿ ಅಲೆ ಪಸರಿಸಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಆಗುವತ್ತ ಸಾಗಿದೆ ಎಂದು ಅವರು ಹೇಳಿದರು.