ನಾಳೆ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ
ಬೆಂಗಳೂರು, ಜೂ.20: ಬೆಂಗಳೂರು ವಿಶ್ವವಿದ್ಯಾಲಯವು 2019ರ ಜೂ.21ರಂದು ಬೆಳಗ್ಗೆ 7ಕ್ಕೆ ಜ್ಞಾನಭಾರತಿಯ ದೈಹಿಕ ಶಿಕ್ಷಣ ಕಾಲೇಜು ಆವರಣದಲ್ಲಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಿದೆ.
ರಾಜ್ಯಪಾಲ ವಜುಭಾಯಿ ವಾಲಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭಾರತರತ್ನ ಪ್ರೊ. ಸಿ.ಎನ್,ಅರ್.ರಾವ್, ಇಸ್ರೊ ಮುಖ್ಯಸ್ಥ ಕೆ.ಶಿವನ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಶಿಕ್ಷಕೇತರ ನೌಕರರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಎಲ್ಲಾ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರುಗಳು ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story