ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಂಸದೆ ಶೋಭಾ ಕರಂದ್ಲಾಜೆ
ಹೊಸದಿಲ್ಲಿ, ಜು.2: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಮಂಗಳವಾರ ಹೊಸದಿಲ್ಲಿಯಲ್ಲಿ ಭೇಟಿ ಮಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ತಮ್ಮ ಲೋಕಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಕೆಲವು ರಸ್ತೆಗಳ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.
ಕರಾವಳಿ ಬೈಪಾಸ್-ಮಲ್ಪೆರಸ್ತೆ ಅಗಲೀಕರಣ, ಪರ್ಕಳದಿಂದ-ತೀರ್ಥಹಳ್ಳಿಯವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿ, ಶೃಂಗೇರಿ-ಬಾಳೆಹೊನ್ನೂರು-ಆಲ್ದೂರು-ನಾಡಿಪುರ ರಸ್ತೆ ಅಭಿವೃದ್ಧಿ.
ತೀರ್ಥಹಳ್ಳಿಯಿಂದ- ನಿಮ್ಮಾರದವರೆಗೆ ರಸ್ತೆ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು (ಮೂಡಿಗೆರೆ-ಕಡೂರು ರಸ್ತೆ) ನಗರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಹಾಗೂ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಇನ್ನಿತರ ಸಮಸ್ಯೆಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದ ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
Next Story