7ನೆ ಮಹಡಿಯಿಂದ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ
ಬೆಂಗಳೂರು, ಜು.2: ನಗರದ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ತಾಯಿಯು ತನ್ನ ಮಗುವಿನೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್ಟಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.
ಆರ್ಟಿ ನಗರದ ವೈಟ್ಹೌಸ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಭಾವನಾ(29) ಹಾಗೂ 2 ವರ್ಷ ದೇವಂತ್ ಮೃತಪಟ್ಟವರು ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.
ಈ ಸಂಬಂಧ ಆರ್ಟಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story