ಗೋಡೆಗೆ ಬೈಕ್ ಢಿಕ್ಕಿ: ವ್ಯಕ್ತಿ ಮೃತ್ಯು
ಬೆಂಗಳೂರು, ಜು.9: ವೇಗವಾಗಿ ಹೋಗುತ್ತಿದ್ದ ಬೈಕ್ ರಸ್ತೆ ಪಕ್ಕದ ಗೋಡೆಗೆ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದಿದೆ.
ನಗರದ ಐಟಿಸಿ ಕಾರ್ಖಾನೆ ಬಳಿ ಈ ಘಟನೆ ನಡೆದಿದ್ದು, ಮಾರನಾಯಕನಹಳ್ಳಿಯ ಲಘುಮಯ್ಯ(46) ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ತನ್ನ ಪುತ್ರನನ್ನು ರಾತ್ರಿ ಪಾಳಯದಲ್ಲಿ ಐಟಿಸಿ ಕಾರ್ಖಾನೆಗೆ ಕೆಲಸಕ್ಕೆ ಬಿಟ್ಟು ಮನೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ರಸ್ತೆ ಪಕ್ಕದ ಗೋಡೆಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಚಿಕ್ಕಜಾಲ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story