ನಾಳೆ ಸಚಿವ ಸಂಪುಟ ಸಭೆ
ಬೆಂಗಳೂರು, ಜು.10: ಶಾಸಕರ ರಾಜೀನಾಮೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಜು.11ರ ಬೆಳಗ್ಗೆ 11 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ವಿಧಾನಸೌಧದ ಮೂರನೆ ಮಹಡಿಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಮೈತ್ರಿ ಸರಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಕುಮಾರಸ್ವಾಮಿ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ವರಿಷ್ಠ ದೇವೇಗೌಡ ನಿವಾಸದಲ್ಲಿ ಮೈತ್ರಿ ನಾಯಕರ ಸಭೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಲಿದ್ದು ತೀವ್ರ ಕುತೂಹಲ ಕೆರಳಿಸಿದೆ.
Next Story