ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮೈತ್ರಿ ಸರಕಾರವನ್ನು ಉಳಿಸಿಕೊಳ್ಳಲು ಯಶವಂತಪುರದ ತಾಜ್ ವಿವಾಂತ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.