ಕಡಿಮೆ ಸ್ಥಾನ ಪಡೆದು ಸಿಎಂ ಆದ ಇತಿಹಾಸವಿಲ್ಲ: ಮಾಳವಿಕ ಅವಿನಾಶ್
ಬೆಂಗಳೂರು, ಜು.15: ಕಳೆದ ವಿಧಾನಸಭಾ ಚುನಾವಣೆಯಲ್ಲಿ 37 ಸೀಟುಗಳನ್ನು ಪಡೆದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದೇ ಆಶ್ಚರ್ಯಕರ ಸಂಗತಿ. ಕಡಿಮೆ ಸೀಟು ಪಡೆದು ಸಿಎಂ ಆದ ಉದಾಹರಣೆ ದೇಶದಲ್ಲಿ ಎಲ್ಲಿಯೂ ನಡೆದಿಲ್ಲ ಎಂದು ಬಿಜೆಪಿ ನಾಯಕಿ ಮಾಳವಿಕ ಅವಿನಾಶ್ ಟೀಕಿಸಿದ್ದಾರೆ.
ಸೋಮವಾರ ನಗರದ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಈಗಾಗಲೇ ವಿಶ್ವಾಸ ಕಳೆದುಕೊಂಡಿದ್ದಾರೆ. 18 ಶಾಸಕರು ರಾಜೀನಾಮೆ ಕೊಟ್ಟು ಸಮ್ಮಿಶ್ರ ಸರಕಾರದ ಸಂಖ್ಯಾಬಲ 100 ಕ್ಕಿಳಿದಿದ್ದು, ಬಿಜೆಪಿ ಸಂಖ್ಯಾಬಲ 107 ಇದೆ. ಹೀಗಾಗಿ, ಸಹಜವಾಗಿ ಸಿಎಂ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ತಿಳಿಸಿದರು.
ಸಮ್ಮಿಶ್ರ ಸರಕಾರದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ಸದನದಲ್ಲಿ ಚರ್ಚೆ ಮಾಡಲು ಹೇಗೆ ಸಾಧ್ಯ. ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರಿದ್ದಾರೆ ಎಂದು ಪ್ರಶ್ನಿಸಿದರು.
Next Story