ಯಡಿಯೂರಪ್ಪ ನಿವಾಸದ ಬಳಿ ಅಭಿಮಾನಿಗಳ ಸಂಭ್ರಮಾಚರಣೆ
ಬೆಂಗಳೂರು, ಜು.24: ಕುಮಾರ ಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಮಂಗಳವಾರ ಪತನಗೊಂಡ ಹಿನ್ನೆಲೆಯಲ್ಲಿ ಹೊಸ ಸರಕಾರ ರಚನೆಗೆ ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿ ಬುಧವಾರ ಬೆಳಗ್ಗೆ ಅಭಿಮಾನಿಗಳು, ಹಿತೈಷಿಗಳು ಧಾವಿಸಿ ಬಂದು ಯಡಿಯೂರಪ್ಪ ಅವರಿಗೆ ಶುಭಾಶಯ ಕೋರುತ್ತಿದ್ದಾರೆ.
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ಖಚಿತವಾಗುತ್ತಿರುವಂತೆಯೇ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ವ್ಯಕ್ತಪಡಿಸುತ್ತಿದ್ದು, ಬೆಳಗಾವಿಯ ಸುವರ್ಣ ಸೌಧದ ಮುಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಬೇಕೆಂದು ಆಗ್ರಹಿಸಿದ್ದಾರೆ.
Next Story