ಸೋಮವಾರ ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, ಜು.28: ವಿಧಾನಮಂಡಲದ ಉಭಯ ಸದನಗಳ ತುರ್ತು ಅಧಿವೇಶನ ಕರೆದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜು.29ರಂದು ಬೆಳಗ್ಗೆ 9 ಗಂಟೆಗೆ ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 133ರಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದ್ದು, ಕಾಂಗ್ರೆಸ್ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.
Next Story