ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ
ಬೆಂಗಳೂರು, ಜು.29: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಶ್ವಾಸ ಮತ ಯಾಚಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಇಂದು ಬೆಳಗ್ಗೆ ನಡೆಯಿತು.
ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತಿತರರು ಭಾಗವಹಿಸಿದ್ದು, ವಿಶ್ವಾಸ ಮತ ಯಾಚನೆಯ ಸಂದರ್ಭ ಪಕ್ಷದ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ.
Next Story