ಮಾದಕ ವಸ್ತು ಮಾರಾಟ ಆರೋಪ: ವಿದೇಶಿ ಪ್ರಜೆ ಸೆರೆ
2 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
ಬೆಂಗಳೂರು, ಜು.31: ಮಾದಕ ವಸ್ತು ಮಾರಾಟ ಆರೋಪದಡಿ ವಿದೇಶಿ ಪ್ರಜೆಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ನೈಜೀರಿಯಾ ದೇಶದ ಟೋನಿ(35) ಬಂಧಿತ ಆರೋಪಿ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.
ಬೃಂದಾವನ ನಗರದ 2ನೇ ಕ್ರಾಸ್ನಲ್ಲಿರುವ ಮನೆಯೊಂದರಲ್ಲಿ ಮಾದಕ ವಸ್ತುಗಳಾದ ಕೊಕೇನ್, ಎಂಡಿಎಂಎ ಮಾತ್ರೆಗಳನ್ನು ಇಟ್ಟುಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯು ಪಾಸ್ಪೋರ್ಟ್-ವೀಸಾ ನಿಯಮಗಳನ್ನು ಉಲ್ಲಂಘಿಸಿ ಮುಂಬೈ ನಗರದಲ್ಲಿ ನೆಲೆಸಿದ್ದಾನೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story