ಉ.ಕ. ದಲ್ಲಿ ಧಾರಕಾರ ಮಳೆ: ಸಿಇಟಿ ವಿದ್ಯಾರ್ಥಿಗಳ ಶುಲ್ಕು ಪಾವತಿ ದಿನಾಂಕ ವಿಸ್ತರಣೆ
ಬೆಂಗಳೂರು, ಆ.7: ಸಿಇಟಿ ಮೂರನೇ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ಗಡುವನ್ನು ಒಂದು ವಾರ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶುಲ್ಕ ಪಾವತಿಗೆ ಇಂದು ಕೊನೆಯ ದಿನವಾಗಿತ್ತು. ಆದರೆ, ಕಳೆದ ನಾಲ್ಕು-ಐದು ದಿನಗಳಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಾಗೂ ಸಾರಿಗೆ ಸಂಚಾರವು ಬಹುತೇಕ ಬಂದ್ ಆಗಿದೆ.
ಸಿಇಟಿ ಮೂರನೇ ಸುತ್ತಿನಲ್ಲಿ ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು, ಪೋಷಕರು ಶುಲ್ಕ ಪಾವತಿ ಗಡುವನ್ನು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಿನಾಂಕವನ್ನು ವಿಸ್ತರಿಸಿ ಆದೇಶಿಸಿದ್ದಾರೆ.
Next Story