ಲಾರಿ ಢಿಕ್ಕಿ: ಇಂಜಿನಿಯರ್ ಮೃತ್ಯು
ಬೆಂಗಳೂರು, ಆ.15: ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ನಲ್ಲಿ ಹೋಗುತ್ತಿದ್ದ ಇಂಜಿನಿಯರ್ ಮೃತಪಟ್ಟಿರುವ ಘಟನೆ ಕಾಮಾಕ್ಷಿ ಪಾಳ್ಯದ ಸುಮನಹಳ್ಳಿ ಮೇಲು ಸೇತುವೆ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬನಶಂಕರಿ ನಿವಾಸಿ ರಾಜಶೇಖರ್(49) ಮೃತಪಟ್ಟಿದ್ದು, ಖಾಸಗಿ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಬುಧವಾರ ಸಂಜೆ ವೇಳೆ ಸುಮನಹಳ್ಳಿ ಮೇಲು ಸೇತುವೆ ರಸ್ತೆಯ ಬಳಿ ಸ್ಕೂಟರ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಾಜಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿರುವ ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ಪೊಲೀಸರು ಅಪಘಾತವೆಸಗಿದ ಲಾರಿ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story