10 ಕೋ.ರೂ. ನೀಡಿದರೆ ಗ್ರಾಮಕ್ಕೆ ಅಲ್ಲ, ಬಡಾವಣೆಗೆ ಹೆಸರಿಡಲಾಗುವುದು: ಸಿಎಂ ಸ್ಪಷ್ಟನೆ
ಬೆಂಗಳೂರು, ಆ.16: ರಾಜ್ಯದಲ್ಲಿ ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ಧಿಗಾಗಿ 10 ಕೋಟಿ ರೂ.ಗೂ ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು. ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
‘ನೆರೆ ಪೀಡಿತ ಗ್ರಾಮಗಳ ಪುನಃಶ್ಚೇತನಕ್ಕೆ 10 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಳ್ಳುವ ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದಕ್ಕೆ ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.
ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂ.ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು.
— CM of Karnataka (@CMofKarnataka) August 16, 2019
ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ
Next Story