ಗಾಂಜಾ ಮಾರಾಟ: ಆರೋಪಿ ಬಂಧನ
ಬೆಂಗಳೂರು, ಆ.16: ಮಾದಕ ವಸ್ತು ಗಾಂಜಾವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಇಟ್ಟಿಗೆ ಆಂಜನಪ್ಪ ಲೇನ್ ನಿವಾಸಿ ಅಹ್ಮದ್ ಶರೀಫ್(43) ಬಂಧಿತ ಆರೋಪಿ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಎನ್.ಆರ್.ರಸ್ತೆಯ 1ನೆ ಕ್ರಾಸ್ನಲ್ಲಿ ಓರ್ವ ವ್ಯಕ್ತಿ ಮಾದಕ ವಸ್ತು ಗಾಂಜಾವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಬರುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಿಸಿಬಿ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಬಂಧಿತನ ವಶದಲ್ಲಿದ್ದ 1 ಕೆಜಿ ಗಾಂಜಾ, ಮೊಬೈಲ್ ಜಪ್ತಿ ಮಾಡಲಾಗಿದ್ದು, ಈತ ಪರಿಚಯಸ್ಥ ಗ್ರಾಹಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಾ, ಹಣ ಸಂಪಾದನೆ ಮಾಡುತ್ತಿದ್ದ ಎನ್ನುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story