ಫೋನ್ ಕದ್ದಾಲಿಕೆ ಆರೋಪ ಪ್ರಕರಣ: ಎಫ್ಐಆರ್ ದಾಖಲಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.20: ಫೋನ್ ಕದ್ದಾಲಿಕೆ ಆರೋಪ ಪ್ರಕರಣ ಸಂಬಂಧ ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಸಿಸಿಬಿ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಅವರಿಂದ ದೂರು ದಾಖಲಾಗಿದ್ದು, ಆ.2ರಂದು ಈ ಘಟನೆ ನಡೆದಿದ್ದು, ಆನ್ಲೈನ್ ಮೂಲಕ ಕೃತ್ಯವೆಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿರುವುದಾಗಿ ತಿಳಿದುಬಂದಿದೆ.
ಐಟಿ ಆಕ್ಟ್ 2000ಯು,ಎಸ್(72), ಟೆಲಿಗ್ರಾಫ್ ಆಕ್ಟ್ ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ಆದರೆ, ಕೃತ್ಯವೆಸಗಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಉಲ್ಲೇಖಿಸಿಲ್ಲ ಎಂದು ಹೇಳಲಾಗುತ್ತಿದೆ.
Next Story