ಕ್ರಿಕೆಟ್ ಬೆಟ್ಟಿಂಗ್ ಆರೋಪ: ಮೂವರ ಬಂಧನ
ಬೆಂಗಳೂರು, ಆ.20: ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಆರೋಪದಡಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, 10.36 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ನಿವಾಸಿಗಳಾದ ವಿಕಾಸ್ ಜೈನ್(38), ಹರೀಶ್ ಕುಮಾರ್(44), ಪ್ರವಿಣ್(32) ಬಂಧಿತ ಆರೋಪಿಗಳು ಎಂದು ಸಿಸಿಬಿ ತಿಳಿಸಿದೆ.
ಬಂಧಿತರು ಕೆಪಿಎಲ್ ಪಂದ್ಯಾವಳಿಯ ಹುಬ್ಬಳ್ಳಿ ಟೈಗರ್ಸ್ ಮತ್ತು ಬಳ್ಳಾರಿ ಟಸ್ಕರ್ಸ್ ತಂಡಗಳ ನಡುವೆ ನಡೆದ ಪಂದ್ಯಕ್ಕೆ ಸಂಬಂಧಪಟ್ಟಂತೆ ಜಿ.ಪಿ ನಗರದ ಮೆಡ್ಲೈಪ್ ಸ್ಟೋರ್ ಬಳಿ ವೆಬ್ಸೈಟ್ ಮೂಲಕ ಹಣ ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಮೆರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಜೂಜಾಟಕ್ಕೆ ಕಟ್ಟಿದ್ದ 10.36 ಲಕ್ಷ ರೂ. ಮತ್ತು ಮೂರು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story