ಬೆಂಗಳೂರು, ಸೆ.5: ಬಿಜೆಪಿ ನೂತನ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಗುರುವಾರ ಬೆಂಗಳೂರಿನಲ್ಲಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭ ನಳಿನ್ ರನ್ನು ಡಿ.ವಿ. ಅಭಿನಂದಿಸಿದರು.
ಈ ಸಂಧರ್ಭ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ದಶರಥ ಉಪಸ್ಥಿತರಿದ್ದರು.