ಕೊಕೇನ್ ಮಾರಾಟ ಆರೋಪ: ವಿದೇಶಿ ಪ್ರಜೆ ಸೆರೆ
1.70 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
ಬೆಂಗಳೂರು, ಸೆ.19: ಮಾದಕ ವಸ್ತು ಕೊಕೇನ್ ಮಾರಾಟ ಆರೋಪದಡಿ ನೈಜೀರಿಯಾ ದೇಶದ ವ್ಯಕ್ತಿಯೊರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 1.70 ಲಕ್ಷ ರೂ. ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ.
ಹೆಣ್ಣೂರು ಬಂಡೆಯ ಭೈರವೇಶ್ವರ ಲೇಔಟ್ನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ನೈಜಿರಿಯಾದ ಅನ್ಬೇರಾ ರಾಜ್ಯದ ಎಕೆನೆ ಒಕ್ಕೊನ್ಕೋವಾ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ನೈಜೀರಿಯಾದಿಂದ ವ್ಯಾಪಾರಿ ವೀಸಾದಡಿ ಭಾರತಕ್ಕೆ ಬಂದಿದ್ದ ಆರೋಪಿಯು ವೀಸಾ ನಿಯಮವನ್ನು ಉಲ್ಲಂಘಿಸಿ ನಗರದ ಹಲವು ಕಡೆ ಸುತ್ತಾಡುತ್ತಾ ಪರಿಚಿತ ಗ್ರಾಹಕರಿಗೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story